National

ನವೆಂಬರ್‌ನಲ್ಲಿ ಹೂಡಿಕೆದಾರರ ಸಮಾವೇಶ; ಜರ್ಮನ್‌ ಅಧಿಕಾರಿಯನ್ನು ಭೇಟಿಯಾದ ನಿರಾಣಿ

ನವದೆಹಲಿ; ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಸೋಮವಾರ ನವದೆಹಲಿಯಲ್ಲಿರುವ ಜರ್ಮನ್ ರಾಯಭಾರ ಕಚೇರಿಯಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ಆಫ್ ಮಿಷನ್ ಡೆಪ್ಯೂಟಿ ಚೀಫ್ ಡಾ. ಸ್ಟೀಫನ್ ಗ್ರಾಭರ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನಲ್ಲಿ ನವೆಂಬರ್ 2 ರಿಂದ 4 ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸುವಂತೆ ಹೂಡಿಕೆದಾರರಿಗೆ ‌ಆಹ್ವಾನಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾದ ಗುಂಜನ್ ಕೃಷ್ಣ ‌ಅವರು ಈ ವೇಳೆ ಉಪಸ್ಥಿತರಿದ್ದರು.

Share Post