International

ಆರ್ಥಿಕ ಬಿಕ್ಕಟ್ಟು ಹಿನ್ನೆಲೆ; ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸ ರಾಜೀನಾಮೆ

ಕೊಲಂಬೊ; ಶ್ರೀಲಂಕಾದಲ್ಲಿ ಆರ್ಥಿಕ ಸಂಕಷ್ಟ ತಲೆದೋರಿರುವ ಹಿನ್ನೆಲೆಯಲ್ಲಿ ಅಲ್ಲಿನ ಪ್ರಧಾನಿ ತಲೆದಂಡವಾಗಿದೆ. ಆರ್ಥಿಕ ಸಂಕಷ್ಟವನ್ನು ಸುಧಾರಿಸುವಲ್ಲಿ ವಿಫಲರಾದ ಕಾರಣ ಪ್ರಧಾನಿ ಹುದ್ದೆಗೆ ಮಹಿಂದ ರಾಜಪಕ್ಸ ಅವರು ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

    ಕೆಲ ದಿನದ ಹಿಂದೆ ನಡೆದ ಶ್ರೀಲಂಕಾದ ಸಂಸತ್ತಿನ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಮಹಿಂದಾ ರಾಜಪಕ್ಸ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಇದಕ್ಕೆ ಮಹಿಂದ ರಾಜಪಕ್ಸ ಸಮ್ಮತಿ ಸೂಚಿಸಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕಾಗಿ ಜನರು ತೀವ್ರ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಅಲ್ಲಿನ ಮಾಜಿ ಕ್ರಿಕೆಟರ್ಸ್ ಸನತ್ ಜಯಸೂರ್ಯ, ಅರ್ಜುನ್ ರಣತುಂಗಾ ಸೇರಿದಂತೆ ಅನೇಕರು​ ಸಹ ಸಾಥ್ ನೀಡಿದ್ದರು.

Share Post