Bengaluru

ದೆಹಲಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ; ಸಂಪುಟ ವಿಸ್ತರಣೆಗೆ ಅನುಮತಿ ಸಿಗುತ್ತಾ..?

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ಭೇಟಿ ನೀಡಿದ್ದಾರೆ. ಬೆಳಗ್ಗೆ 8 ವಿಮಾನದಲ್ಲಿ ಬೆಂಗಳೂರಿನಿಂದ ಹೊರಟ ಅವರು, ಬೆಳಗ್ಗೆ 10.40ಕ್ಕೆ ದೆಹಲಿ ತಲುಪಿದ್ದಾರೆ. ನವೆಂಬರ್​​ನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈಕಮಿಷನರ್​​ಗಳ ಜೊತೆಗೆ ಸಭೆ ನಡೆಸಲು ಅವರು ದೆಹಲಿಗೆ ಭೇಟಿ ನೀಡಿದ್ದಾರೆ. ಈ ನಡುವೆ ಅವರು ವರಿಷ್ಠ ನಾಯಕರನ್ನು ಭೇಟಿ ಮಾಡಿ, ಸಂಪುಟ ವಿಸ್ತರಣೆ ಸಂಬಂದ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. 

 

ಸಂಜೆ ವಿದೇಶಗಳ ರಾಯಭಾರಿಗಳನ್ನು ಸಿಎಂ ಭೇಟಿಯಾಗಲಿದ್ದಾರೆ. ಅದಕ್ಕೂ ಮೊದಲು ಅವರು, ಕೇಂದ್ರದ ಸಚಿವರು ಹಾಗೂ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಸಂಪುಟ ವಿಸ್ತರಣೆಗೆ ಹಲವು ದಿನಗಳಿಂದ ಬೇಡಿಕೆ ಇರುವುದರಿಂದ ವರಿಷ್ಠರ ಒಪ್ಪಿಗೆ ಪಡೆಯಲು ಸಿಎಂ ಮುಂದಾಗಿದ್ದಾರೆ. ವರಿಷ್ಠರು ಒಪ್ಪಿಗೆ ಸೂಚಿಸಿದರೆ, ನಾಲ್ಕೈದು ದಿನದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  ಇನ್ನು  ಸಂಜೆ 6 ಗಂಟೆಗೆ ಇನ್ವೆಸ್ಟ್ ಕರ್ನಾಟಕ-2022 ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ವಿವಿಧ ದೇಶಗಳ ರಾಯಭಾರಿಗಳು ಮತ್ತು ಹೈ ಕಮೀಷನರ್ ಗಳ ಜೊತೆ ಆಯೋಜನೆ ಮಾಡಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದು ಹೂಡಿಕೆದಾರರ ಸಮಾವೇಶಕ್ಕೆ ಅಧಿಕೃತ ಆಹ್ವಾನ ನೀಡಲಿದ್ದಾರೆ.

Share Post