ಶೀಘ್ರವೇ ಬಿಬಿಎಂಪಿ ಚುನಾವಣೆ ಸಾಧ್ಯತೆ
ನವದೆಹಲಿ; ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ.
ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ತನ್ನ ಆದೇಶದಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಶೀಘ್ರವೇ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ.