2-3 ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ; ಸಿಎಂ ಬೊಮ್ಮಾಯಿ
ನವದೆಹಲಿ; ಬಿಜೆಪಿ ವರಿಷ್ಠರೊಂದಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿದ್ದೇನೆ. ಎರಡು ಮೂರು ದಿನದಲ್ಲಿ ಹೈಕಮಾಂಡ್ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ನಡೆಸಿದ ಮಾತುಕತೆ ನಂತರ ಸಿಎಂ ಬೊಮ್ಮಾಯಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ವರಿಷ್ಠರ ಜೊತೆ ಚರ್ಚೆ ಮಾಡಿದ್ದೇನೆ. ಜೊತೆಗೆ ಸಂಪುಟ ವಿಸ್ತರನೆ ಬಗ್ಗೆಯೂ ವರಿಷ್ಠರ ಗಮನಕ್ಕೆ ತಂದಿದ್ದೇನೆ. ವರಿಷ್ಠರು ಎರಡು ಮೂರು ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ. ಈ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಮಾತನಾಡುವುದಾಗಿ ಅಮಿತ್ಷಾ ತಿಳಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.