ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ; ಸಂಪುಟ ಸಭೆ ಒಪ್ಪಿಗೆ
ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಸಲಾಗುತ್ತಿದೆ. ಈ ಪ್ರಸ್ತಾಪಕ್ಕೆ ಇಂದು ಮಧ್ಯಾಹ್ನ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸಭೆ ಬಳಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಚಾರವನ್ನು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ದೊರಕಿದ್ದ ಮಸೂದೆಯನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.