ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ರಾಜೀನಾಮೆ; ಬಿಜೆಪಿ ಸೇರುವ ಸಾಧ್ಯತೆ
ಅಹಮದಾಬಾದ್; ಗುಜರಾತ್‌ನ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಗುಜರಾತ್ ಚುನಾವಣೆ ಹತ್ತಿರವಿರುವ ಸಮಯದಲ್ಲಿ ಹಾರ್ದಿಕ್ ಪಟೇಲ್ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್ ಪಟೇಲ್ ಗೈರಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪಟೇಲ್ ಕಾಂಗ್ರೆಸ್ ತೊರೆದಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್ ಪಟೇಲ್ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಹಾರ್ದಿಕ್ ಪಟೇಲ್ ಬಿಜೆಪಿ ಪಕ್ಷ ಸೇರುತ್ತಾರೆಂಬ ಮಾತುಗಳು ಕೇಳಿಬರುತ್ತಿವೆ.