National

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗೆ ಮೀಸಲಾತಿ; ಸುಪ್ರೀಂ ಗ್ರೀನ್‌ ಸಿಗ್ನಲ್‌

ನವದೆಹಲಿ; ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ಮೀಸಲಾತಿ ಬಯಸಿದ್ದವರಿಗೆ ಇದು ಖುಷಿಯ ಸುದ್ದಿ. ಯಾಕಂದ್ರೆ ಮಧ್ಯಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ರಾಜಕೀಯ ಮೀಸಲಾತಿಗೆ ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದೆ.

ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ 27ರಷ್ಟು ಮೀಸಲಾತಿ ನೀಡಲು ಅಲ್ಲಿನ ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮೀಸಲಾತಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಹೇಳಿತ್ತು. ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವಂತೆಯೂ ಮಧ್ಯಪ್ರದೇಶದ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

Share Post