ಮೇಕೆದಾಟು ಪಾದಯಾತ್ರೆ ವೇಳೆ ಕಾನೂನು ಉಲ್ಲಂಘನೆ; ಸಿದ್ದರಾಮಯ್ಯಗೆ ಸಮನ್ಸ್
ಬೆಂಗಳೂರು; ಮೇಕೆದಾಡು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ್ದ ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ ಮೇ.24ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ
ಜನವರಿ 9 ರಿಂದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆ ಆರಂಭಿಸಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಆದ ಕಾರಣ ಪಾದಯಾತ್ರೆಯ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ನಿರ್ದೇಶನದ ನಂತರ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಳಿಸಲಾಗಿತ್ತು. ಆದರೆ ಪಾದಯಾತ್ರೆ ನಡೆಸುವುದಕ್ಕೆ ಅನುಮತಿ ಪಡೆಯದಿದ್ದರೂ ಪಾದಯಾತ್ರೆ ನಡೆಸಿದ ಕಾರಣ, ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.