ಭಯೋತ್ಪಾದಕರೊಂದಿಗೆ ನಂಟು; ಉಗ್ರರಿಂದ ಹಣ ಪಡೆದಿದ್ದ ಯುವಕ ಅರೆಸ್ಟ್
ಪುಣೆ; ಕಾಶ್ಮೀರದ ಭಯೋತ್ಪಾದಕ ಸಂಘಟನೆಯಿಂದ ಹಣ ವರ್ಗಾವಣೆ ಮಾಡಿಸಿಕೊಂಡ ಆರೋಪದ ಮೇಲೆ ಇಲ್ಲಿನ ದಾಪೋಡಿ ಬಳಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಜುನೈದ್ ಮೊಹಮ್ಮದ್ ಎಂದು ಗುರುತಿಸಲಾಗಿದೆ.
ಭಯೋತ್ಪಾದಕ ಸಂಘಟನೆ ಬಂಧಿತ ಆರೋಪಿ ಹಣಕಾಸಿನ ಸಹಾಯ ಪಡೆದ ಆರೋಪ ಎದುರಿಸುತ್ತಿದ್ದಾನೆ. ಈ ಬಗ್ಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಪುಣೆ ಕೋರ್ಟ್‌ಗೆ ಆರೋಪಿಯನ್ನು ಹಾಜರುಪಡಿಸಲಾಗುತ್ತದೆ.