Bengaluru

ಚಾರ್ಜ್‌ಶೀಟ್‌ ಸಲ್ಲಿಕೆಗೆ ಹೆದರುವ ಅಗತ್ಯವಿಲ್ಲ; ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆಯಷ್ಟೇ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು. ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಇಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚಾರ್ಜ್‌ಶೀಟ್‌ನಲ್ಲಿ ಏನಿದೆ ಅಂತ ಗೊತ್ತಿಲ್ಲ. ನಿಮಗೂ ಆ ಬಗ್ಗೆ ಮಾಹಿತಿ ಗೊತ್ತಿಲ್ಲ. ನಮ್ಮ ವಕೀಲರ ಜೊತೆ ಚರ್ಚಿಸುತ್ತೇವೆ. ಚಾರ್ಜ್‌ಶೀಟ್‌ ಕಾಪಿ ನಾಳೆ ಅಥವಾ ಸೋಮವಾರ ಸಿಗಬಹುದು ಎಂದರು.

ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿರುತ್ತದೆ. ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ. ನಾವು ಮಾನಸಿಕವಾಗಿ, ದೈಹಿಕವಾಗಿ ಎಲ್ಲ ರೀತಿಯಲ್ಲಿ ಪ್ರಕರಣ ಎದುರಿಸಲು ಸಿದ್ಧರಾಗಿದ್ದೇವೆ ಎಂದು ಡಿ.ಕೆ.ಸುರೇಶ್‌ ಇದೇ ವೇಳೆ ಹೇಳಿದರು.

Share Post