National

ರಾಜಕೀಯ ಅರ್ಥವಾಗದಿದ್ದರೆ ಅಡುಗೆ ಮಾಡು; ವಿವಾದಕ್ಕೆ ಕಾರಣ ಬಿಜೆಪಿ ನಾಯಕನ ಹೇಳಿಕೆ

ಮುಂಬೈ: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ಅವರು ಸಂಸದೆ ಸುಪ್ರಿಯಾ ಸುಳೆ ಬಗ್ಗೆ ವಿವಾದಿತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.  ರಾಜಕೀಯ ಅರ್ಥವಾಗದಿದ್ದರೆ, ಮನೆ ಹೋಗಿ ಅಡುಗೆ ಮಾಡು ಎಂಬ ಹೇಳಿಕೆ ನೀಡುವುದರ ಮೂಲಕ ಚಂದ್ರಕಾಂತ್‌ ವಿವಾದ ಹುಟ್ಟು ಹಾಕಿದ್ದಾರೆ. ಅವರ ವಿರುದ್ಧ ಮಹಿಳಾ ಸಂಘಟನೆಗಳು ಮುಗಿಬಿದ್ದಿವೆ.

ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ವೆ ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದರು. ಈ ಮಾತು ಈಗ ವಿವಾದಕ್ಕೆ ಕಾರಣವಾಗಿದೆ.

Share Post