ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ; ಮಹಿಳೆ ಸಾವು
ವಾಷಿಂಗ್ಟನ್; ಅಮೆರಿಕದಲ್ಲಿ ಗುಂಡಿನ ದಾಳಿಗಳು ಮುಂದುವರೆಯುತ್ತಲೇ ಇವೆ. ಟೆಕ್ಸಾಸ್‌ನ ಶಾಲೆಯಲ್ಲಿ ಇತ್ತೀಚೆಗೆ ನಡೆದ ಗುಂಡಿನ ದಾಳಿಗೆ ವೇಳೆ 21 ಮಂದಿ ಮೃತಪಟ್ಟಿದ್ದರು. ಅನಂತರ ಮತ್ತೊಂದು ಕಡೆ ಕೂಡಾ ಇದೇ ರೀತಿಯ ದಾಳಿ ನಡೆದಿತ್ತು. ಇದೀಗ ಒಕ್ಲಹೋಮಾ ಉತ್ಸವದಲ್ಲೂ ಗುಂಡಿನ ಸದ್ದು ಕೇಳಿಬಂದಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ.
ಸ್ಕೈಲರ್ ಬಕ್ನರ್ ಎಂಬಾತ ಈ ಗುಂಡಿನ ದಾಳಿ ನಡೆಸಿದ್ದಾನೆಂದು ತಿಳಿದುಬಂದಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಒಕ್ಲಹೋಮಾದ ತಾರ್‌ಫ್ಟ್ ಎಂಬಲ್ಲಿ ಸ್ಮಾರಕ ದಿನದ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿತ್ತು. ಇದರಲ್ಲಿ ಸುಮಾರು 1,500 ಜನರು ಭಾಗಿಯಾಗಿದ್ದರು. ಈ ವೇಳೆ ಕೆಲವರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಸ್ಕೈಲರ್ ಗುಂಡಿನ ದಾಳಿ ನಡೆಸಿದ್ದಾನೆಂದು ತಿಳಿದುಬಂದಿದೆ.