BengaluruCrime

ಖಾಸಗಿ ಆಸ್ಪತ್ರೆ ಮೇಲ್ಛಾವಣಿ ಕುಸಿತ; ಇಬ್ಬರ ರಕ್ಷಣೆ

ಬೆಂಗಳೂರು; ನೃಪತುಂಗ ರಸ್ತೆಯಲ್ಲಿರುವ ಸೆಂಟ್ ಮಾರ್ಥಾಸ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದು ಅವಾಂತರ ಸೃಷ್ಟಿಸಿದೆ. ಮೇಲ್ಛಾವಣಿ ನಿರ್ಮಾಣ ಹಂತದಲ್ಲಿದ್ದು, ಇಂದು ಕೂಡಾ ಕಾರ್ಮಿಕರು ನಿರ್ಮಾಣ ಕೆಲಸ ಮಾಡಲು ಆಗಮಿಸಿದ್ದರು. ಈ ವೇಳೆ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಕಾರ್ಮಿಕರು ಅದರಲ್ಲಿ ಸಿಲುಕಿದ್ದರು. ಇಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. 

 

ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಕುಸಿದ ಮೇಲ್ಛಾವಣಿ ತೆರವು ಮಾಡಿ, ಅದರ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣೆ ಮಾಡುತ್ತಿದ್ದಾರೆ. ಈಗಾಗಲೇ ಇಬ್ಬರನ್ನು ರಕ್ಷಿಸಿದ್ದಾರೆ. ಉಳಿದಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೆಸಿಬಿ ಯಂತ್ರದ ಮೂಲಕ ಅವಶೇಷಗಳನ್ನು ತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Share Post