ಕುವೆಂಪುರನ್ನು ಅವಮಾನಿಸಿದ ಎಲ್ಲರ ವಿರುದ್ಧವೂ ಕ್ರಮ ಅಗತ್ಯ; ಆದಿಚುಂಚನಗಿರಿ ಶ್ರೀ
ಬೆಂಗಳೂರು; ಜಾಲತಾಣಗಳಲ್ಲಿ ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿರುವ ಎಲ್ಲರ ವಿರುದ್ಧವೂ ಸೈಬರ್ ಅಪರಾಧ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನಾಡಗೀತೆಯನ್ನು ಅವಹೇಳನ ಮಾಡಿದ ವಿಷಯವನ್ನು ಸರ್ಕಾರ ಹಿಂದೆಯೇ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಂಡಿದ್ದರೆ, ಈಗ ಈ ಸ್ಥಿತಿ ಬರುತ್ತಿರಲಿಲ್ಲ. ಈಗಲೂ ಸುಮ್ಮನೆ ಬಿಟ್ಟರೆ ಮುಂದೆ ಬೇರೆ ಯಾರಾದರೂ ರಾಷ್ಟ್ರಗೀತೆಯನ್ನು ಅವಮಾನಿಸಲೂಬಹುದು. ಸಾಮಾಜಿಕ ಜಾಲತಾಣದ ಮೂಲಕ ಅವಮಾನಿಸಿದವರು, ಅದನ್ನು ಹಂಚಿಕೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದರು ಎಂದು ತಿಳಿದುಬಂದಿದೆ.