Districts

ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ; ಪ್ರೀತಿಸಿ ಮದುವೆಯಾಗಿದ್ದ ಯುವತಿ, ವರ್ಷ ಕಳೆಯುವುದರೊಳಗೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅನುಷಾ ಸಾವನ್ನಪ್ಪಿದ ಯುವತಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅನುಷಾಳ ಒಂದು ಕಿವಿ ಕಟ್‌ ಆಗಿದ್ದು, ಆ ಭಾಗ ಪತ್ತೆಯಾಗಿಲ್ಲ. ಈ ಘಟನೆ ನಡೆದಿರೋದು ಚಿಕ್ಕಬಳ್ಳಾಪುರ ನಗರದಲ್ಲಿ.

ಮೃತ ಯುವತಿ ಅನುಷಾ  ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದ ಅರುಣಾ ಹಾಗೂ ಕೊಂಡಪ್ಪ ದಂಪತಿಗಳ ಪುತ್ರಿ. ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಅನುಷಾ,  1 ವರ್ಷದ ಹಿಂದೆ ಚಿಕ್ಕಬಳ್ಳಾಪುರ ತಾಲೂಕಿನ ಕರಿಗಾನಪಾಳ್ಯ ಗ್ರಾಮದ ಅಭಿಲಾಷ್‍ನನ್ನು ಪ್ರೀತಿಸಿ ಮದುವೆಯಾಗಿದ್ದಳು.

ಮದುವೆಯಾದ ನಂತರ ಚಿಕ್ಕಬಳ್ಳಾಪುರ ನಗರದ 9ನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇದಕ್ಕಿಂದಂತೆ ಬೆಳಗ್ಗೆ ಅನುಷಾ ಶವವಾಗಿ ಪತ್ತೆಯಾಗಿದ್ದಾಳೆ.

 

Share Post