ಅಂಬೇಡ್ಕರ್ ಪಠ್ಯ ವಿವಾದ; ಕಾಂಗ್ರೆಸ್ಗೆ ಬಿಜೆಪಿ ತಿರುಗೇಟು
ಬೆಂಗಳೂರು; ಪಠ್ಯಪುಸ್ತಕದಲ್ಲಿ ಅಂಬೇಡ್ಕರ್ ಹೆಸರಿನ ಮುಂದೆ ಸಂವಿಧಾನ ಶಿಲ್ಪಿ ಎಂಬ ಪದವನ್ನು ತೆಗೆದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕಾಂಗ್ರೆಸ್ಗೆ ತಿರುಗೇಟು ನೀಡಿ ಟ್ವೀಟ್ ಮಾಡಿದೆ.
10ನೇ ತರಗತಿಯ ಪಠ್ಯಪುಸ್ತಕದಲ್ಲಿರುವ ಅಂಬೇಡ್ಕರ್ ಪಾಠದ ಚಿತ್ರವನ್ನು ಬಿಜೆಪಿ ಟ್ವೀಟ್ ಮಾಡಿದೆ. `ಉದಾತ್ತ ಚಿಂತನೆಗಳು’ ಮೊದಲ ಅಧ್ಯಾಯದಲ್ಲಿ ಅಂಬೇಡ್ಕರ್ ಎನ್ನುವ ಒಂದು ಪುಟದ ಮಾಹಿತಿಯನ್ನು ದಲಿತ ವಿರೋಧಿ ಕಾಂಗ್ರೆಸ್ ಎಂಬ ಹ್ಯಾಶ್ಟ್ಯಾಗ್ನೊಂದಿಗೆ ಟ್ವೀಟ್ ಮಾಡಿದೆ.
`ಹತ್ತನೇ ತರಗತಿಯ ಕನ್ನಡ ಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಪಠ್ಯವೇ ಇರಲಿಲ್ಲ. ನಮ್ಮ ಸರ್ಕಾರ ಅಂಬೇಡ್ಕರ್ ಅವರ ಪಠ್ಯವನ್ನು ಸೇರಿಸಿ ಕಾಂಗ್ರೆಸ್ ಮಾಡಿದ ತಪ್ಪನ್ನು ಅಳಿಸಿ ಹಾಕಿದೆ. ಸಂವಿಧಾನ ಪಿತಾಮಹರನ್ನು ಕಾಂಗ್ರೆಸ್ ಮರೆತಿತ್ತೇ ಹೊರತು, ನಾವಲ್ಲ ಎಂದೂ ಬರೆದುಕೊಂಡಿದೆ.