Bengaluru

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಾದ ಲೋಪಗಳನ್ನು ವಿರೋಧಿಸಿ ಜೂನ್‌ 9 ರಂದು ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹಿರಿಯುರ, ಸಾಹಿತಿಗಳು, ಸ್ವಾಮೀಜಿಗಳು ಪಠ್ಯ ಪರಿಷ್ಕರಣೆ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಜೂನ್‌ ೯ರಂದು ವಿಧಾನಸೌದದಿಂದ ಗಾಂಧಿ ಪ್ರತಿಮೆವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಕೂಡಲೇ ಹೊಸ ಪಠ್ಯಕ್ರಮವನ್ನು ಕೈಬಿಡಬೇಕು ಎಂದು ಡಿ.ಕೆ.ಶಿವಕುಮಾರ್‌ ಆಗ್ರಹಿಸಿದರು. ಪಠ್ಯದಲ್ಲಿ ಅಂಬೇಡ್ಕರ್‌ಗೆ ಅಪಮಾನ ಮಾಡಲಾಗಿದೆ. ಬಸವಣ್ಣ, ಕುವೆಂಪು ಅವರನ್ನೂ ಅಪಮಾನಿಸಲಾಗಿದೆ. ಇದು ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಆದ ಸಾಂಸ್ಕೃತಿಕ ಅತ್ಯಾಚಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share Post