Bengaluru

ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ನಿಂದನೆ; ನಟಿ ರಮ್ಯಾರಿಂದ ದೂರು

ಬೆಂಗಳೂರು; ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ​ ನಟಿ ರಮ್ಯಾ ಕೇಂದ್ರ ವಿಭಾಗದ‌‌ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.

    ದಿವ್ಯ ಸ್ಪಂದನ ಹೆಸರಿನಲ್ಲಿರುವ ಇನ್​​ಸ್ಟಾಗ್ರಾಮ್​ ಅಕೌಂಟ್​​ನಲ್ಲಿ ಇತ್ತೀಚೆಗೆ ಪೋಸ್ಟ್ ಮಾಡಿದ ಫೋಟೋಗಳಿಗೆ‌ ಕೆಲವರು ಕಮೆಂಟ್ ಮಾಡಿ ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಮ್ಯಾ ಮನವಿ ಮಾಡಿದ್ದಾರೆ.

ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದವರ ವಿರುದ್ಧ ರಮ್ಯಾ ದೂರು ನೀಡಿದ್ದರು.

Share Post