ಬೆಳ್ಳಂಬೆಳಗ್ಗೆ ಸರಣಿ ಅಪಘಾತ; ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು; ಮೈಸೂರು ರಸ್ತೆನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿ ನಜ್ಜುಗುಜ್ಜಾಗಿದೆ. ಇದರಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್‍ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಆಟೋ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಭೀರಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಅಪಘಾತವಾದ ನಾಲ್ಕು ವಾಹನಗಳನ್ನು ತೆರವು ಮಾಡಲಾಗಿದೆ. ನಡುರಸ್ತೆಯಲ್ಲಿ ಅಪಘಾತ ಆಗಿದ್ದು, ಮೈಸೂರು ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.