ರಾಹುಲ್, ಸೋನಿಯಾಗೆ ಸಮನ್ಸ್; ಕಾಂಗ್ರೆಸ್ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ; ಸುರ್ಜೇವಾಲಾ
ನವದೆಹಲಿ; ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಬ್ರಿಟೀಷರ ಕೈಯಲ್ಲೇ ಆಗಲಿಲ್ಲ. ಇನ್ನು ಬಿಜೆಪಿ ಕೈಯಿಂದ ಏನು ಸಾಧ್ಯ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಸಮನ್ಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆಗೆ ನೀಡಿರುವ ಸುರ್ಜೇವಾಲಾ ಅವರು, ಸತ್ಯ ಕಾ ಸಂಗ್ರಾಮ್ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿಯೇ ಮುಂದುವರಿಯುತ್ತೆ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಬ್ರಿಟಿಷರಿಗೆ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲಾಗಲಿಲ್ಲ. ಇನ್ನು ಈ ಆಡಳಿತ ಪಕ್ಷದಿಂದ ಏನು ಸಾಧ್ಯವಾಗುತ್ತೆ ಎಂದು ಕಿಡಿಕಾರಿದ್ದಾರೆ.
2012 ರಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ದೂರು ಸಲ್ಲಿಸಿದ್ದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಪಡೆಯುವಲ್ಲಿ ವಂಚನೆ ಮಾಡಲಾಗಿದ್ದು, ಇಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ತನಿಖೆಗೆ ಮನವಿ ಮಾಡಿದ್ದರು.