ಕೊವಿಡ್ ಪ್ರಕರಣಗಳ ಹೆಚ್ಚಳ; ಮಧ್ಯಾಹ್ನ 3ಕ್ಕೆ ತಾಂತ್ರಿಕ ಸಲಹಾ ಸಮಿತಿ ಸಭೆ
ಬೆಂಗಳೂರು; ಬೆಂಗಳೂರಿನಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊವಿಡ್ ನಾಲ್ಕನೇ ಅಲೆ ಬರುವ ಭೀತಿ ಎದುರಾಗಿದೆ. ಹೀಗಾಗಿ ಸರ್ಕಾರ ಇದನ್ನು ಗಂಭಿರವಾಗಿ ತೆಗೆದುಕೊಂಡಿದೆ. ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಿರುವ ಸರ್ಕಾರ, ಮತ್ತಷ್ಟು ಬಿಗಿ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 3 ಗಂಟೆಗೆ ಈ ಬಗ್ಗೆ ಚರ್ಚಿಸಲು ಆರೋಗ್ಯ ಸಚಿವ ಕೆ.ಸುಧಾಕರ್ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ನಾಲ್ಕನೇ ಅಲೆ ಹಾಗೂ ಪ್ರಸ್ತು ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅನಂತರ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.