ಮೇಕೆದಾಟು ಅಣೆಕಟ್ಟೆ ವಿಚಾರ; ತಮಿಳುನಾಡಿನಿಂದ ಹುನ್ನಾರ-ಬೊಮ್ಮಾಯಿ
ಬೆಂಗಳೂರು; ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ವಿಚಾರ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸ್ಟಾಲಿನ್ ಪ್ರತಿಯನ್ನು ತರಿಸಿಕೊಳ್ಳುತ್ತೇನೆ. ಅದನ್ನು ಓದಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ, ತಮಿಳುನಾಡಿನವರ ಬೇಡಿಕೆ ಕಾನೂನು ಬಾಹಿರ ಎಂದು ಹೇಳಿದ್ದಾರೆ.
ನಮ್ಮ ನೀರಿಗಾಗಿ ತಮಿಳುನಾಡು ಸರ್ಕಾರ ಹುನ್ನಾರ ನಡೆಸುತ್ತಿದೆ. ಅದನ್ನು ನಾವು ಸಹಿಸುವುದಿಲ್ಲ. ಮೇಕೆದಾಟು ಅಣೆಕಟ್ಟೆ ಕಟ್ಟೇ ಕಟ್ಟುತ್ತೇವೆ. ಅದಕ್ಕಾಗಿ ಈಗಾಗಲೇ ಪ್ರಕ್ರಿಯೆಗಳು ಶುರುವಾಗಿದೆ. ಅಣೆಕಟ್ಟೆ ವಿಚಾರವಾಗಿ ಈಗಾಗಲೇ ಹದಿನೈದು ಸಭೆಗಳನ್ನೂ ನಡೆಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.