BengaluruPolitics

ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ; ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು; ಕಾಂಗ್ರೆಸ್‌ ನಾಯಕರ ವಿರುದ್ಧ ತನಿಖೆ ಸಂಸ್ಥೆಗಳನ್ನು ಛೂಬಿಡುವ ಮೂಲಕ ಬಿಜೆಪಿ ನೀಚ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರತಿಭಟನೆ ನಮ್ಮ ಹಕ್ಕು ಅದನ್ನು ಹತ್ತಿಕ್ಕಲು ಆಗದು ಎಂದಿದ್ದಾರೆ.

ನಮ್ಮ ನಾಯಕರು ಯಾವುದೇ ರೀತಿಯ ತಪ್ಪು ಮಾಡಿಲ್ಲ. ನಮ್ಮ ನಾಯಕರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ. ಇದು ನೆಹರೂ ಕುಟುಂಬ ನಿರ್ನಾಮ ಮಾಡುವ ಹುನ್ನಾರ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಕಿಡಿಕಾರಿದ್ದಾರೆ. ಎಐಸಿಸಿ ಕಚೇರಿಗೆ ಹೋದ್ರೆ ಅರೆಸ್ಟ್‌ ಮಾಡ್ತೀರಿ ಅಂದ್ರೆ ಏನರ್ಥ..? ನಮ್ಮ ಮನೆಗೆ ನಾವು ಹೋದರೆ ಬಂಧಿಸುತ್ತೀರಾ ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್‌, ಬಿಜೆಪಿ ನೀಚ ರಾಜಕಾರಣದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

Share Post