ನ್ಯಾಷನಲ್ ಹೆರಾಲ್ಡ್ ಕೇಸ್; ಕಿರುಕುಳ ನೀಡಲು ಬಿಜೆಪಿ ಮಾಡಿರುವ ಷಡ್ಯಂತ್ರ – ಸಿದ್ದರಾಮಯ್ಯ
ಶಿವಮೊಗ್ಗ; ನ್ಯಾಷನಲ್ ಹೆರಾಲ್ಡ್ ಪ್ರಕರಣ ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿಗೆ ರಾಜಕೀಯವಾಗಿ ಕಿರುಕುಳ ನೀಡುವ ಉದ್ದೇಶದಿಂದ ಬಿಜೆಪಿಯವರು ಮಾಡಿರುವ ಷಡ್ಯಂತ್ರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಷನಲ್ ಹೆರಾಲ್ಡ್ ಹೊಸ ಪ್ರಕರಣ ಅಲ್ಲ. ಈ ಹಿಂದೆ ತನಿಖೆಯೂ ಅಗಿದೆ. ಆದರೂ ರಾಜಕೀಯ ದ್ವೇಷದಿಂದ ಈ ರೀತಿ ಮಾಡಲಾಗುತ್ತಿದೆ. ಇಡಿ, ಐಟಿ ಸ್ವತಂತ್ರ ಸಂಸ್ಥೆಗಳು. ಅವು ಕಾನೂನುಬದ್ಧವಾಗಿ ಕೆಲಸ ಮಾಡಬೇಕಿದೆ. ಆದರೆ ಈಗ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ. ವಿರೋಧಿಗಳನ್ನು ಹತ್ತಿಕ್ಕಲು ಬಳಸಿಕೊಳ್ಳಲಾಗುತ್ತಿದೆ. 60 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಯಾವತ್ತೂ ಹೀಗೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.