National

ದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಭಾರಿ ಬೆಂಕಿ ಅನಾಹುತ; ಬೆಂಕಿ ನಂದಿಸಲು ಹರಸಾಹಸ

ನವದೆಹಲಿ; ದೆಹಲಿ ರೋಹಿಣಿಯ ಬುಧ್ ವಿಹಾರ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.  ಮಂಗೇರಂ ಪಾರ್ಕ್ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ಮಟ್ಟದಲ್ಲಿ ಬೆಂಕಿ ಆವರಿಸಿದೆ. ಕಟ್ಟಡದ ಕೆಳ ಮಹಡಿಯಲ್ಲಿ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಜನರಲ್ಲಿ ಭೀತಿ ಹುಟ್ಟಿಸಿದೆ.

ಮಧ್ಯಾಹ್ನ 3.55ಕ್ಕೆ ಅಗ್ನಿಶಾಮಕ ದಳಕ್ಕೆ ಬೆಂಕಿ ಕಾಣಿಸಿಕೊಂಡಿದೆ . ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ.

 

Share Post