Bengaluru

ಬಿಬಿಎಂಪಿ ವಾರ್ಡ್‌ ಮರುವಿಂಗಡಣೆ ಕರಡು ಪ್ರಕಟಿಸಿದ ಸರ್ಕಾರ

ಬೆಂಗಳೂರು; ಬಿಬಿಎಂಪಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗುವ ಲಕ್ಷಣ ಕಾಣುತ್ತಿದೆ. ವಾರ್ಡ್‌ ಮರುವಿಂಗಡಣೆ ವಿಚಾರವನ್ನೇ ಮುಂದಿಟ್ಟುಕೊಂಡು ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರ, ಇದೀಗ ವಾರ್ಡ್‌ ಮರುವಿಂಗಡಣೆಯ ಕರಡು ಪ್ರತಿಯನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಸಾರ್ವಜನಿಕರ ಆಕ್ಷೇಪಣೆಗಾಗಿ ಈ ಕರಡು ಪ್ರಕಟಿಸಲಾಗಿದೆ. ಸಾರ್ವಜನಿಕರು 15 ದಿನಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ. ಈ ಮೊದಲು ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳಿದ್ದವು. ಈಗ ಅವುಗಳನ್ನು ಮರುವಿಂಗಡಣೆ ಮಾಡಿ, ಒಂದಷ್ಟು ಪ್ರದೇಶಗಳನ್ನು ಸೇರಿಸಿಕೊಂಡು 243 ವಾರ್ಡ್‌ಗಳಾಗಿ ವಿಂಗಡಿಸಲಾಗಿದೆ.

Share Post