CrimeInternational

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ಗೆ 15 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್; 2008 ರಲ್ಲಿ ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್‌ಗೆ ಹಣಕಾಸಿಕ ಪ್ರಕರಣವೊಂದರಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೂನ್‌ ಆರಂಭದಲ್ಲಿ ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ನಿಷೇಧಿತ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಕಾರ್ಯಕರ್ತ ಸಾಜಿದ್ ಮಜೀದ್ ಮಿರ್‌ಗೆ ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣದಲ್ಲಿ 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಹಿರಿಯ ವಕೀಲರು ತಿಳಿಸಿದ್ದಾರೆ.

2022ರ ಏಪ್ರಿಲ್‌ನಲ್ಲಿ ಬಂಧನಕ್ಕೊಳಗಾಗಿದ್ದ ಮೀರ್‌ನನ್ನು ಪ್ರಸ್ತುತ ಕೋಟ್‌ ಲಖ್‌ಪತ್‌ ಜೈಲಿನಲ್ಲಿ ಇರಿಸಲಾಗಿದೆ. ಮೀರ್‌ಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದು, 4 ಲಕ್ಷ ರೂಪಾಯಿ ದಂಡವನ್ನೂ ಕೋರ್ಟ್‌ ವಿಧಿಸಿದೆ. ಮೊದಲು ಎಲ್ಲರೂ ಮೀರ್ ಸತ್ತಿದ್ದಾರೆ ಎಂದು ಭಾವಿಸಿದ್ದರು. 26/11 ಮುಂಬೈ ದಾಳಿಯಲ್ಲಿ ಒಟ್ಟು 166 ಜನರು ಸಾವನ್ನಪ್ಪಿದ್ದರು.

2005ರಲ್ಲಿ ನಕಲಿ ಪಾಸ್‌ಪೋರ್ಟ್ ಬಳಸಿ ಮಿರ್ ಭಾರತಕ್ಕೆ ಬಂದಿದ್ದ. ಮುಂಬೈ ದಾಳಿಯ ನಂತರ ‘ಪ್ರಾಜೆಕ್ಟ್ ಮ್ಯಾನೇಜರ್’ ಎಂದು ಗುರುತಿಸಿಕೊಂಡಿದ್ದ ಈತ 2005ರಲ್ಲಿ ನಕಲಿ ಹೆಸರಿನ ನಕಲಿ ಪಾಸ್ ಪೋರ್ಟ್ ಬಳಸಿ ಭಾರತಕ್ಕೆ ಭೇಟಿ ನೀಡಿದ್ದ. ಇದಕ್ಕೂ ಮೊದಲು, ಜೂನ್ 14-17 ರಂದು ಬರ್ಲಿನ್‌ನಲ್ಲಿ ನಡೆದ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಪ್ಲೀನರಿ ಸಭೆಯಲ್ಲಿ, ಸಾಜಿದ್ ಮಿರ್ ನನ್ನು ಏಪ್ರಿಲ್‌ನಲ್ಲಿ ಪಾಕಿಸ್ತಾನಿ ಅಧಿಕಾರಿಗಳು ಬಂಧಿಸಿದರು. ವಿಚಾರಣೆಯ ನಂತರ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಿದರು. ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಭಯೋತ್ಪಾದಕ ಹಣಕಾಸು ಪ್ರಕರಣದಲ್ಲಿ ಲಾಹೋರ್ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಈಗಾಗಲೇ 68 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

 

Share Post