ತಹಸೀಲ್ದಾರ್ ಕಚೇರಿಯಲ್ಲೇ ವಿಷ ಸೇವಿಸಿದ ಗ್ರಾಪಂ ಸದಸ್ಯ..!
ದಾವಣಗೆರೆ; ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಎಲ್ಲರ ಮುಂದೆಯೇ ತಹಸೀಲ್ದಾರ್ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ನಾಯ್ಕ್ ಆತ್ಮಹತ್ಯೆಗೆ ಯತ್ನಿಸಿದವರು. ತೀವ್ರವಾಗಿ ಅಸ್ವಸ್ಥಗೊಂಡಿರುವ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಜಮೀನು ವಿವಾದವೊಂದರ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಅದರ ಆದೇಶ ತನ್ನ ಪರವಾಗಿ ಬಂದಿಲ್ಲ ಎಂದು ಲೋಕೇಶ್ ನೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಹಸೀಲ್ದಾರ್ ಕಚೇರಿಯಲ್ಲೇ ವಿಷ ಸೇವಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದವರು ಬಿಡಿಸಲು ಎಷ್ಟೇ ಪ್ರಯತ್ನಿಸಿದರೂ, ಅವರು ವಿಷಯ ಕುಡಿದಿದ್ದಾರೆ. ಹೀಗಾಗಿ ಲೋಕೇಶ್ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.