ಶಿವಸೇನೆ ಶಾಸಕರ ಬಂಡಾಯ; 16 ಶಾಸಕರಿಗೆ ಅನರ್ಹತೆಯ ನೋಟಿಸ್ ಜಾರಿ
ಮುಂಬೈ; ಮಹಾರಾಷ್ಟ್ರ ರಾಜಕೀಯ ಗಂಟೆ ಗಂಟೆಗೂ ಕುತೂಹಲಕ್ಕೆ ಕಾರಣವಾಗುತ್ತಿದೆ. ಈ ನಡುವೆ ಶಿವಸೇನೆಯ 16 ಜನ ಬಂಡಾಯ ಶಾಸಕರಿಗೆ ವಿಧಾನಸಭೆಯ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ, ಮುಂದೆ ಇದು ಯಾವ ಹಂತ ತಲುಪುತ್ತದೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಸಾರಿರುವ ಏಕನಾಥ ಶಿಂಧೆ ನೇತೃತ್ವದ ಸುಮಾರು 38 ಶಾಸಕರು ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಈ ಬಣದಲ್ಲಿರುವ 16 ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್ ಅನರ್ಹತೆಯ ನೋಟಿಸ್ ಜಾರಿಗೊಳಿಸಿದ್ದಾರೆ. ಅಲ್ಲದೇ, ಎಲ್ಲ 16 ಶಾಸಕರು ಜೂನ್ 27ರ ಸೋಮವಾರದೊಳಗೆ ನೋಟಿಸ್ಗೆ ತಮ್ಮ ಲಿಖಿತ ಉತ್ತರಗಳನ್ನು ಸಲ್ಲಿಸಬೇಕೆಂದು ಸೂಚಿಸಿದ್ದಾರೆ.