National

ಕುಲ್ಗಾಂ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ; ಇಲ್ಲಿನ ಕುಲ್ಗಾಂ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ನೌಪೊರಾ ಖೆರ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನೊಂದೆಡೆ ದೋಡಾ ಜಿಲ್ಲೆಯಲ್ಲಿ ಉಗ್ರನೊಬ್ಬನನ್ನು ಬಂಧಿಸಿ, ಆತನ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ದೋಡಾ ನಿವಾಸಿ ಫರೀದ್‌ ಅಹ್ಮದ್‌ ಎಂದು ಗುರುತಿಸಲಾಗಿದೆ. ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ವೇಳೆ ಪರಿಶೀಲನೆ ನಡೆಸಿದಾಗ ಫರೀದ್‌ ಬಳಿ ಚೀನೀಸ್ ಪಿಸ್ತೂಲ್‌ ಮತ್ತು ಸ್ಫೋಟಕಗಳಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

Share Post