ರಾಜ್ಯದ ಜನಕ್ಕೆ ಬೆಲೆ ಏರಿಕೆ ಬಿಸಿ; ಜುಲೈ 1 ರಿಂದ ವಿದ್ಯುತ್ ದರ ಏರಿಕೆ
ಬೆಂಗಳೂರು; ಬೆಲೆ ಏರಿಕೆ ಬಿಸಿ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಆಯಿತು. ಇದೀಗ ವಿದ್ಯುತ್ ದರ ಏರಿಕೆ ಸರದಿ. ರಾಜ್ಯದಲ್ಲಿ ಜುಲೈ 1 ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ. ಜುಲೈ 1 ರಿಂದ ವಿದ್ಯುತ್ ದರ 19 ರೂಪಾಯಿಯಿಂದ 31 ರವರೆಗೆ ಹೆಚ್ಚಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು, ಇನ್ಮುಂದೆ ಹೆಚ್ಚುವರಿಯಾಗಿ 19 ರೂಪಾಯಿಂದ 31 ರೂಪಾಯಿ ಪಾವತಿಸಬೇಕು.
ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಎಸ್ಕಾಂಗಳು (ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಗೆಸ್ಕಾಂ, ಸೆಸ್ಕ್ ನಿಂದ ಪ್ರಸ್ತಾವ ಸಲ್ಲಿಸಲು ಅನುಮೋದಿಸಲಾಗಿತ್ತು.