National

ಸಮುದ್ರದಲ್ಲಿ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ಆರು ಮಂದಿಯ ರಕ್ಷಣೆ

ಮುಂಬೈ;  ಮುಂಬೈನ ONGC ರಿಗ್ ಸಾಗರ್ ಕಿರಣ್ ಬಳಿ ಅರಬ್ಬೀ ಸಮುದ್ರದಲ್ಲಿ ಹೆಲಿಕಾಪ್ಟರ್ ಒಂದು ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್​ನಲ್ಲಿ 7 ಮಂದಿ ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳಿದ್ದರು. ಇದರಲ್ಲಿ ಆರು ಮಂದಿಯನ್ನು ರಕ್ಷಿಸಲಾಗಿದೆ.  ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ಟ್ವೀಟ್ ಮಾಡಿದೆ.

ಕೋಸ್ಟ್ ಗಾರ್ಡ್ ಏರ್‌ಕ್ರಾಫ್ಟ್ ಲೈಫ್ ರಾಫ್ಟ್‌ಗಳನ್ನು ನೀಡಿ, ಹೆಲಿಕಾಪ್ಟರ್​ನಲ್ಲಿದ್ದವರನ್ನು ರಕ್ಷಿಸಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಭಾರತೀಯ ನೌಕಾಪಡೆ ಮತ್ತು ONGC ಯೊಂದಿಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶಕ್ಕೆ ಕಾರಣಗಳು ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Share Post