ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣ; ಎನ್ಐಎಯಿಂದ ಪ್ರಕರಣದ ವಿಚಾರಣೆ
ನವದೆಹಲಿ; ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಶಿರಚ್ಛೇದ ಪ್ರಕರಣದ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನಡೆಸಲಿದೆ. ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಎನ್ಐಎಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಸಂಘಟನೆ ಮತ್ತು ಅಂತಾರಾಷ್ಟ್ರೀಯ ಸಂಬಂಧದ ಕುರಿತಂತೆ ಎನ್ಐಎ ಸಮಗ್ರ ತನಿಖೆ ನಡೆಸಲಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಟ್ವೀಟ್ ಮಾಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಘಟನೆ ಖಂಡಿಸಿ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆಗಳು ಆರಂಭವಾಗಿವೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.