National

ಉದಯಪುರ ಹತ್ಯೆ ಪ್ರಕರಣ; ಆರೋಪಿಗಳಿಗೆ ವಿದೇಶಿ ನಂಟು – ಸಿಎಂ ಅಶೋಕ್‌ ಗೆಹ್ಲೋಟ್‌

ಜೈಪುರ; ಉದಯಪುರದಲ್ಲಿ ನಡೆದ ಟೈಲರ್‌ ಕನ್ಹಯ್ಯ ಲಾಲ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ವಿದೇಶಿ ನಂಟಿರುವುದು ದೃಢಪಟ್ಟಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕನ್ಹಯ್ಯ ಲಾಲ್‌ ಹತ್ಯೆಯ ಹಿಂದೆ ಸಮಾಜದಲ್ಲಿ ಭಯ ಸೃಷ್ಟಿಸುವ ಉದ್ದೇಶವಿರುವುದು ಖಚಿತವಾಗಿದೆ. ಹಂತಕರು ವಿದೇಶಿ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶಾಂತಿ ಕಾಪಾಡಲು ಮನವಿ ಮಾಡಿರುವ ಅಶೋಕ್‌ ಗೆಹ್ಲೋಟ್‌, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ಉದಯಪುರದಲ್ಲಿ ಟೈಲರ್‌ ಕನ್ಹಯ್ಯ ಲಾಲ್‌ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದರು.

Share Post