ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ಅಲೋಕ್ ಅರಾಧೆ ನೇಮಕ
ಬೆಂಗಳೂರು; ಜುಲೈ 2ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನ್ಯಾಯಮೂರ್ತಿ ಅವಸ್ಥಿ ಅವರು ಜುಲೈ 2ರಂದು ತಮ್ಮ 62ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗುತ್ತಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.