Bengaluru

ಜುಲೈ 5ರವರೆಗೆ ರಾಜ್ಯಾದ್ಯಂತ ಮಳೆ; ಕರಾವಳಿ ರಣಾರ್ಭಟ

ಬೆಂಗಳೂರು; ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯಾದ್ಯಂತ ಮುಂಗಾರಿನ ಪರಿಣಾಮ ಹೆಚ್ಚಾಗಲಿದೆ. ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್‌ ಹೇಳಿದ್ದಾರೆ. ಇಂದು ಮತ್ತು ಜು.5 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟಕ್ಕೆ ನಲುಗಿರುವ ಕರಾವಳಿಯಲ್ಲಿ ಮತ್ತೆ ಐದು ದಿನ ಮಳೆಯ ರಣಾರ್ಭಟ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ನೈರುತ್ಯ ಮುಂಗಾರು ಮಳೆ ಚುರುಕುಗೊಂಡಿದೆ. ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಲಿದೆ. 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಸುಳಿಗಾಳಿ ಹಾಗೂ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಇನ್ನೈದು ದಿನ ಮಳೆ ಚುರುಕಾಗಲಿದೆ ಎಂದು ಪ್ರಸಾದ್‌ ತಿಳಿಸಿದ್ದಾರೆ.

Share Post