BengaluruHealth

ಬೆಂಗಳೂರಿನಲ್ಲಿ 438 ನಮ್ಮ ಕ್ಲಿನಿಕ್‌ ಸ್ಥಾಪನೆ; ಸಚಿವ ಮಾಧುಸ್ವಾಮಿ

ಬೆಂಗಳೂರು; ಬೆಂಗಳೂರಿನಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡಲಾಗುವುದು. ಆ ಮೂಲಕ ಬಡವರಿಗೆ ಉಚಿತವಾಗಿ ಉತ್ಕೃಷ್ಟ ಚಿಕಿತ್ಸಾ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ನಮ್ಮ ಕ್ಲಿನಿಕ್‌ಗಾಗಿ 103 ಕೋಟಿ ರೂಪಾಯಿ ಮೀಸಲಿಸಲಾಗಿದೆ. ಮೊದಲಿಗೆ 438 ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಸರ್ಕಾರ ಮುಂದಿದ್ದು, ಇದಕ್ಕೆ 438 ವೈದ್ಯಾಧಿಕಾರಿಗಳು ಹಾಗೂ 438 ನರ್ಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಇನ್ನು ಪೌರಕಾರ್ಮಿಕರಿಗೆ ಮಾಸಿಕ 2 ಸಾವಿರ ರೂಪಾಯಿ ಸಂಕಷ್ಟ ಭತ್ಯೆ ನೀಡಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

Share Post