CrimeNational

ಸಾಮೂಹಿಕ ಅತ್ಯಾಚಾರ; ಗರ್ಭಿಣಿಯಾಗಿದ್ದ ಯುವತಿ ಮೇಲೆ ಹಲ್ಲೆ

ಲಕ್ನೋ; ಯುವತಿ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಬೆದರಿಕೆ ಹಾಕಿ ಸುಮ್ಮನಿರಿಸಿದ್ದರು. ಈಗ ಆಕೆ ಗರ್ಭವತಿಯಾಗಿದ್ದು, ಈ ವಿಚಾರ ತಿಳಿದ ದುರುಳರು, ಆಕೆಯ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರಪ್ರದೇಶದ ದೇವಬಂದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಯುವತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಆಕೆ ಗರ್ಭಿಣಿಯಾಗಿದ್ದಾಳೆಂದು ತಿಳಿದ ಕೂಡಲೇ ಆಕೆಯನ್ನು ಕೊಲ್ಲಲು ಮುಂದಾಗಿದ್ದಾರೆ. ಜೂನ್ 25 ರಂದು ಆಕೆ ಅವರಿಂದ ತಪ್ಪಿಸಿಕೊಂಡು ಮನೆಗೆ ಮರಳಿದ್ದಳು. ಜೂನ್ 26 ರಂದು ನಾಲ್ವರೂ ಆಕೆಯ ಮನೆಗೆ ಬಂದು ಮತ್ತೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿ ಆಕೆಗೆ ಗರ್ಭಪಾತವಾಗಿದೆ ಎಂದು ಎಸ್ಪಿ ಸೂರಜ್ ರೈ ತಿಳಿಸಿದ್ದಾರೆ.

Share Post