Bengaluru

ಬಾಕಿ ಇರುವ ಪ್ರಕರಣಗಳಿಗಾಗಿ ಎಸಿಬಿ ದಾಳಿ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು; ಜಮೀರ್‌ ಅಹ್ಮದ್‌ ವಿರುದ್ಧದ ಪ್ರಕರಣಗಳ ತನಿಖೆ ಬಾಕಿ ಇತ್ತು. ಈ ಹಿನ್ನೆಲೆಯಲ್ಲಿ ಸಾಕ್ಷಿ ಆಧರಿಸಿ ಎಸಿಬಿ ಅಧಿಕಾರಿಗಳು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಸಿಬಿ ದಾಳಿ ರಾಜಕೀಯ ಪ್ರೇರಿತ ಎಂದು ಟೀಕಿಸಿರುವ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಮೀರ್‌ ವಿರುದ್ಧ ಬಾಕಿ ಪ್ರಕರಣಗಳ ಸಂಬಂಧ ದಾಳಿ ನಡೆಸಲಾಗಿದೆ. ಈ ಸಂಬಂಧ  ವಿಚಾರಣೆ‌ ನಡೆಯುತ್ತಿದೆ. ಎಸಿಬಿ ದಾಳಿ ಸಂದರ್ಭದಲ್ಲಿ ಪ್ರತಿಭಟನೆ ಮಾಡಿಸಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.  ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳಬೇಡಿ ಅಂತಾ ಕೋರ್ಟ್‌ ಹೇಳುತ್ತೆ. ಆ ಕರ್ತವ್ಯ ಮಾಡೋಕೆ ಹೋದಾಗ ಅಡಚಣೆ ಮಾಡುವುದು, ಅದಕ್ಕೆ ರಾಜಕೀಯ ಬಣ್ಣ ಕೊಡುವುದು ಸರ್ವೇ ಸಾಮಾನ್ಯ ಎಂದು ಹೇಳಿದ್ದಾರೆ.

 

Share Post