ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಇನ್ಫಿ ನಾರಾಯಣಮೂರ್ತಿ ಅಳಿಯ ರಿಷಿ
ಲಂಡನ್; ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ಕೂಡಾ ತನ್ನ ಸ್ಥಾನ ತೊರೆದಿದ್ದಾರೆ. ಸಂಸತ್ತಿನ ಕಳಂಕಿತ ಸದಸ್ಯರೊಬ್ಬರನ್ನು ಪ್ರಮುಖ ಹುದ್ದೆಗೆ ನೇಮಿಸುವಂತೆ ಪ್ರಧಾನಿ ಬೋರಿಸ್ ಜಾನ್ಸನ್ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಈ ಬೆಳವಣಿಗೆ ನಡೆದಿದ್ದು ಬ್ರಿಟನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.
ರಿಷಿ ಸುನಕ್ ರಾಜೀನಾಮೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸರ್ಕಾರ ಸಮರ್ಥವಾಗಿ ಮತ್ತು ಗಂಭೀರವಾಗಿ ನಡೆಯಬೇಕೆಂಬುದು ಜನರು ನಿರೀಕ್ಷೆ. ಆದ್ರೆ ಅದು ನಡೆಯುತ್ತಿಲ್ಲ. ಇದು ನನ್ನ ಕೊನೆಯ ಸರ್ಕಾರಿ ಹುದ್ದೆ ಎಂದು ಹೇಳಲು ಬಯಸುತ್ತೇನೆ. ನನ್ನ ಹೋರಾಟಕ್ಕೆ ಇದು ಮಾನದಂಡವಾಗಲಿದೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಪ್ರಧಾನಿಗೆ ಬರೆದ ನನ್ನ ಪತ್ರ ಕೆಳಗಿದೆ’ ಎಂದು ತಿಳಿಸಿದ್ದಾರೆ. ರಿಷಿ ಅವರು 2015ರಲ್ಲಿ ಬ್ರಿಟನ್ ಸಂಸತ್ತನ್ನು ಪ್ರವೇಶಿಸಿದ್ದರು. 2020ರಲ್ಲಿ, ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವ ಹುದ್ದೆಗೇರಿದರು.