Districts

ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಕೊಚ್ಚಿಹೋದ ಮಹಿಳೆ

ಬೀದರ್; ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಮಹಿಳೆಯೊಬ್ಬರು ಕೊಚ್ಚಿಹೋಗಿರುವ ಘಟನೆ ಬೀದರ್‌ ಜಿಲ್ಲೆ ಔರಾದ್‌ ತಾಲ್ಲೂಕಿನ ನಾಗೂರ್‌ ಬಿ ಗ್ರಾಮದಲ್ಲಿ ನಡೆದಿದೆ. ಸುಮನಾ ಬಾಯಿ ರೆಡ್ಡಿ ಖಂದಾಡೆ(48) ಎಂಬ ಮಹಿಳೆಯೇ ನೀರಿನಲ್ಲಿ ಕೊಚ್ಚಿ ಹೋದವರು.

ಜಮೀನಿನಲ್ಲಿ ಕೆಲಸ ಮುಗಿಸಿ ಮನೆ ವಾಪಸ್ಸಾಗುತ್ತಿದ್ದಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ.  ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಹಲವು ಗಂಟೆಗಳಿಂದ ಸತತವಾಗಿ ಪರಿಶೀಲನೆ ಮಾಡಿದರು. ಆದರೆ ಮಹಿಳೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಠಾಣಾಕೂಸನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದ್ದ ರೈತ ಮಹಿಳೆಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಜಂಟಿಯಾಗಿ ಶೋಧ ಕಾರ್ಯ ಮುಂದುವರೆದಿದೆ.

Share Post