ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ರೆಡ್ ಅಲರ್ಟ್ ಘೋಷಣೆ
ಬೆಂಗಳೂರು; ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಿರುವಾಗಲೇ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ.
ಕರಾವಳಿಯಾದ್ಯಂತ ಈ ವಾರಾಂತ್ಯದವರೆಗೂ ಭಾರೀ ಮಳೆ ನಿರೀಕ್ಷಿಸಲಾಗಿದೆ. ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಆಯಾಯ ಜಿಲ್ಲಾಡಳಿತವು ಎಚ್ಚರಿಸಿದೆ ಸಾಮಾನ್ಯವಾಗಿ ಜೂನ್‌ನಲ್ಲಿ ಭಾರತದ ಸರಾಸರಿ ಮಳೆಯ ಪ್ರಮಾಣ 16.53 ಸೆಂ.ಮೀ. ಆಗಬೇಕಿತ್ತು. ಮಾನ್ಸೂನ್ ಮುಂಚಿತವಾಗಿ ಪ್ರವೇಶಿಸಿದರೂ ಈ ಭಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗದಿರುವುದು ರೈತರಲ್ಲಿ ಕೊಂಚ ಆತಂಕಕ್ಕೀಡು ಮಾಡಿದೆ.