ಆಲ್ಟ್‌ನ್ಯೂಸ್ ಸಹಸಂಸ್ಥಾಪಕ ಝುಬೇರ್‌ಗೆ 5 ದಿನಗಳ ಮಧ್ಯಂತರ ಜಾಮೀನು
ನವದೆಹಲಿ; ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೇರ್‌ಗೆ ಸುಪ್ರೀಂಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಉತ್ತರ ಪ್ರದೇಶದ ಸೀತಾಪುರದಲ್ಲಿ ಅವರ ವಿರುದ್ಧ ದಾಖಲಾದ ದೂರಿಗೆ ಸಂಬಂಧಿಸಿದಂತೆ ಈ ಜಾಮೀನು ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಝುಬೇರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಝುಬೇರ್‌ಗೆ 5 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದ್ದು, ಈ ಅವಧಿಯಲ್ಲಿ ಸೀತಾಪುರ ನ್ಯಾಯಾಲಯ ವ್ಯಾಪ್ತಿಯಿಂದ ಹೊರಗೆ ಹೋಗಕೂಡದು ಎಂದು ಷರತ್ತು ವಿಧಿಸಲಾಗಿದೆ. ಜೊತೆಗೆ ಪ್ರಕರಣ ಸಂಬಂಧ ಯಾವುದೇ ಹೊಸ ಟ್ವೀಟ್ ಮಾಡಕೂಡದು ಎಂದು ಸೂಚಿಸಲಾಗಿದೆ.