Districts

ತುಂಗಭದ್ರಾದಿಂದ ನೀರು ಬಿಡುಗಡೆ; ಮುಳುಗುತ್ತಾ ಹಂಪಿ ಸ್ಮಾರಕ..?

ಹೊಸಪೇಟೆ; ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಈ ಭಾಗದಲ್ಲಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ತುಂಬಿದೆ. ಹೀಗಾಗಿ ಜಲಾಶಯದಿಂದ ನೀರು ಹೊರಬಿಡಲಾಗುತ್ತಿದ್ದು, ಇದರಿಂದ ಹಂಪಿ ಸ್ಮಾರಕಕ್ಕೆ ಹಾನಿಯಾಗುವ ಭೀತಿ ಎದುರಾಗಿದೆ.

ಜಲಾಶಯದ ಒಟ್ಟು 33 ಕ್ರಸ್ಟ್ ಗೇಟ್ ಗಳ ಪೈಕಿ 28 ಗೇಟ್ ಗಳಿಂದ ನದಿಗೆ ಸದ್ಯ 80 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ ಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ತುಂಗಭದ್ರಾ ನದಿ ಪಾತ್ರಕ್ಕೆ ಹೊಂದಿಕೊಂಡಿವೆ. ಹೀಗಾಗಿ, ಹಂಪಿ ಸ್ಮಾರಕಗಳಿಗೆ ಹಾನಿಯಾಗುವ ಆತಂಕ ಶುರುವಾಗಿದೆ.

ತುಂಗಭದ್ರಾ ಜಲಾಶಯ 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಒಂದು ಲಕ್ಷ ಕ್ಯುಸೆಕ್ ಗೂ ಅಧಿಕ ಒಳಹರಿವು ಇದೆ. ಒಂದೂವರೆ ಲಕ್ಷ ಕ್ಯುಸೆಕ್ ನೀರು ಯಾವುದೇ ಕ್ಷಣದಲ್ಲೂ ನದಿಗೆ ಹರಿಸಲಾಗುತ್ತದೆ. ಜನ ಮುನ್ನೆಚ್ಚರಿಕೆ ವಹಿಸಬೇಕೆಂದು ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

 

Share Post