ಹೆಚ್ಚಾಯ್ತು ಮಂಕಿ ಫಾಕ್ಸ್ ಭೀತಿ; ಕೇರಳದಲ್ಲಿ ಶಂಕಿತ ಪ್ರಕರಣ ಪತ್ತೆ..!
ತಿರುವನಂತಪುರ; ಭಾರತದಲ್ಲೂ ಮಂಕಿ ಫಾಕ್ಸ್ ಸೋಂಕು ಕಾಣಿಸಿಕೊಂಡಿದೆ. ಕೇರಳದ ವ್ಯಕ್ತಿಯೊಬ್ಬರಲ್ಲಿ ಮಂಕಿಫಾಕ್ಸ್ ರೀತಿಯ ಲಕ್ಷಣಗಳ ಕಂಡುಬಂದಿವೆ. ವಿದೇಶದಿಂದ ಆಗಮಿಸಿದ್ದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ರೀತಿಯ ಲಕ್ಷಣಗಳು ಕಾಣಿಸಿದ್ದು, ವ್ಯಕ್ತಿಯ ಮಾದರಿಯನ್ನು ರಾಷ್ಟ್ರೀಯ ವೈರಾಣು ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಎಚ್‌ಒ) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದೆ. ಸಿಡುಬು ರೋಗಿಗಳಲ್ಲಿ ಹಿಂದೆ ಕಂಡುಬರುತ್ತಿದ್ದ ರೋಗಲಕ್ಷಣಗಳನ್ನು ಹೋಲುತ್ತದೆ. ಆದರೂ ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿರುತ್ತದೆ ಎಂದು ತಿಳಿದುಬಂದಿದೆ. ಶಂಕಿತ ವ್ಯಕ್ತಿ ಮೈಮೇಲೆ ಗುಳ್ಳೆಗಳು ಕಾಣಿಸಿಕೊಂಡಿವೆ. ಹೀಗಾಗಿ ಶಂಕಿತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಆತನಿಗೆ ಯಾವ ಸೋಂಕಿದೆ ಎಂದು ಬಯಲಾಗಲಿದೆ.