BengaluruCrime

ಎಡಿಜಿಪಿ ಅಮೃತ್‌ ಪಾಲ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಎಡಿಜಪಿ ಅಮೃತ್‌ ಪಾಲ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಂದನೇ ಎಸಿಎಂಎಂ ಕೋರ್ಟ್‌ ಈ ಆದೇಶ ನೀಡಿದೆ.

ಪಿಎಸ್‌ಐ ನೇಮಕಾತಿ ಪರೀಕ್ಷೆ ವೇಳೆ ಅಮೃತ್‌ ಪಾಲ್‌ ಅವರು ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಈ ವೇಳೆ ತಮ್ಮ ಕಚೇರಿಯಲ್ಲೇ ಒಎಂಆರ್‌ ಶೀಟ್‌ಗಳನ್ನು ತಿದ್ದಿದ ಆರೋಪ ಅವರ ಮೇಲಿದೆ. ಈ ಬಗ್ಗೆ ಖಚಿತ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಅಮೃತ್‌ ಪಾಲ್‌ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

Share Post