BengaluruPolitics

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಚಾಮುಂಡೇಶ್ವರ ವಿಧಾನಸಭಾ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು.

ಕಳೆದ ಚುನಾವಣೆಯಲ್ಲಿ ಅಲ್ಲಿನ ಮತದಾರರು ನನ್ನನ್ನು ಸೋಲಿಸಿದ್ದರು. ಹೀಗಾಗಿ ನಾನು ಆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು. ಇನ್ನು ಇದೇ ವೇಳೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇದು ಅಚ್ಛೇ ದಿನದ ಭಾಗವೇ ಎಂದು ಪ್ರಶ್ನೆ ಮಾಡಿದರು.

Share Post