ಉಪರಾಷ್ಟ್ರಪತಿ ಚುನಾವಣೆ; ನಾಮಪತ್ರ ಸಲ್ಲಿಸಿದ ಜಗದೀಪ್ ಧನಕರ್
ನವದೆಹಲಿ; ಆಗಸ್ಟ್ 6 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮುಂತಾದವರು ಹಾಜರಿದ್ದರು.
ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ ಅವರು, 1989ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. 2019ರಲ್ಲಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಿಸಲಾಗಿತ್ತು. ಇನ್ನು ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವರನ್ನು ಕಣಕ್ಕಿಳಿಸಲಾಗಿದೆ.