ಚಾರ್ಜಿಂಗ್ ಮಾಡುವ ವೇಳೆ ಬೆಂಕಿ; ಶೋರೂಂನಲ್ಲಿ ಏಳು ಬೈಕ್‌ಗಳು ಭಸ್ಮ..!
ಮುಂಬೈ; ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದೀಗ ಮುಂಬೈನಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲೇ ಏಳು ಬೈಕ್‌ಗಳು ಸುಟ್ಟು ಭಸ್ಮವಾಗಿದೆ. ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಏಳು ಹೊಸ ಬೈಕ್‌ಗಳು ಸುಟ್ಟು ಕರಕಲಾಗಿವೆ.
ಪುಣೆಯ ಗಂಗಾಧಾಮ್ ಪ್ರದೇಶದ ಬಳಿಯ ಇ-ಬೈಕ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿದ್ದ ಸಿಬ್ಬಂದಿ ಕೂಡಲೇ ಎಚ್ಚೆತ್ತ ಕಾರಣ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ. ಬೈಕ್‍ಗಳಿಗೆ ಪ್ಲಗ್ ಹಾಕಿ ಚಾರ್ಚಿಂಗ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಬೈಕ್‍ಗಳಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವೇನು ಎಂಬುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್‍ನಲ್ಲಿಯೂ ಪುಣೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡಿತ್ತು. ಹೀಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಪರಿಶೀಲನೆ ನಡೆಸಲು 1,441 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹಿಂಪಡೆದಿತ್ತು.